HomeKarnatakaBREAKING : ದಾವಣಗೆರೆಯಲ್ಲಿ ಘೋರ ದುರಂತ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ...

BREAKING : ದಾವಣಗೆರೆಯಲ್ಲಿ ಘೋರ ದುರಂತ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ..!

ದಾವಣಗೆರೆ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ತಾಲೂಕಿನ ಕಾಟೀಹಳ್ಳ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನಾಗರಾಜ್ ಹಾಗೂ ಲತಾ ಎಂದು ಗುರುತಿಸಲಾಗಿದೆ. ಅಡಿಕೆ ತೋಟದಲ್ಲಿ ಟಿಸಿ ಸಂಪರ್ಕದ ತಂತಿ ತುಳಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಟಿಸಿ ಸಂಪರ್ಕಿಸುವ ತಂತಿ ತುಂಡಾಗಿ ತೋಟದಲ್ಲಿ ಬಿದ್ದಿತ್ತು ಎನ್ನಲಾಗಿದೆ. ಒಬ್ಬರನ್ನು ಕಾಪಾಡಲು ಹೋಗಿ ಇನ್ನೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular