HomeIndiaBREAKING: ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

BREAKING: ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಜಗದ್ಗುರು ಪಂಚಮ ನಿಜಲಿಂಗೇಶ್ವರ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮಯೂರ್ ಕುಂಬಾರ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮಯೂರ್ ಕುಂಬಾರ ಓದುತ್ತಿದ್ದ. ಹಾಸ್ಟೆಲ್ ರೂಮ್ ನಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪೋಷಕರು ಸ್ಥಳಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆಗೆ ಮೃತದೇಹ ಸ್ಥಳಾಂತರಿಸಲಾಗುವುದು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular