HomeBusinessರಾಜ್ಯಕ್ಕೆ ಗುಡ್ ನ್ಯೂಸ್: ಫಾಕ್ಸ್ ಕಾನ್ ನಿಂದ 25 ಸಾವಿರ ಕೋಟಿ ರೂ. ಹೂಡಿಕೆ: 40,000...

ರಾಜ್ಯಕ್ಕೆ ಗುಡ್ ನ್ಯೂಸ್: ಫಾಕ್ಸ್ ಕಾನ್ ನಿಂದ 25 ಸಾವಿರ ಕೋಟಿ ರೂ. ಹೂಡಿಕೆ: 40,000 ಉದ್ಯೋಗ ಸೃಷ್ಟಿ

ಬೆಂಗಳೂರು: ತೈವಾನ್ ಮೂಲದ ಫಾಕ್ಸ್ ಕಾನ್ ಕಂಪನಿ ರಾಜ್ಯದ ದೊಡ್ಡಬಳ್ಳಾಪುರ ಬಳಿ 25,000 ಕೋಟಿ ರೂಪಾಯಿ ಹೂಡಿಕೆಯ ಮೂಲಕ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿದೆ. ಈ ಕಂಪನಿಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಫಾಕ್ಸ್ ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಶುಕ್ರವಾರ ರಾತ್ರಿ ನಡೆದ ಭೋಜನ ಕೂಟದಲ್ಲಿ ಅವರು ಮಾತನಾಡಿದರು.

ಫಾಕ್ಸ್ ಕಾನ್ ಕಂಪನಿ ಗೆ ವಿದ್ಯುತ್, ನೀರು, ರಸ್ತೆ ಮತ್ತಿತರ ಮೂಲ ಸೌಲಭ್ಯ ಒದಗಿಸಲಾಗುವುದು. ಕಂಪನಿಯು ಫ್ಯಾಬ್ ಉದ್ಯಮ ವಲಯ ಸೇರಿ ಮಿಕ್ಕ ವಲಯಗಳಲ್ಲೂ ಹೆಚ್ಚಿನ ಹೂಡಿಕೆ ಮಾಡಲು ಆಸಕ್ತಿ ತೋರಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಂಗ್ ಲಿಯು ಮಾತನಾಡಿ, ರಾಜ್ಯದಲ್ಲಿ ಸದ್ಯದಲ್ಲಿಯೇ ಘಟಕ ಕಾರ್ಯಾಚರಣೆ ಆರಂಭಿಸಲಿದೆ. ಚೀನಾದ ನಂತರ ಎರಡನೇ ಅತ್ಯಂತ ಬೃಹತ್ ಘಟಕ ಇದಾಗಿದ್ದು, 40,000 ಮಧ್ಯಮ ಸ್ತರದ ವಿದ್ಯಾವಂತರಿಗೆ ಉದ್ಯೋಗಾವಕಾಶ ಸಿಗಲಿದೆ. ಮುಂದಿನ ದಿನಗಳಲ್ಲಿ ಹೂಡಿಕೆ ಮತ್ತಷ್ಟು ಹೆಚ್ಚಿಸಲಾಗುವುದು. ಉದ್ಯೋಗಿಗಳಿಗೆ ಗುಣಮಟ್ಟದ ಮನರಂಜನೆ, ಜಿಮ್, ವಸತಿ ಸೌಲಭ್ಯ, ಆಹಾರ ಸೇರಿ ಅನೇಕ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮನ್ನಣೆಗಳಿಸಿರುವ  ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ನವೋದ್ಯಮಗಳು, ಹೈಟೆಕ್ ಉದ್ಯಮಗಳು ಸೇರಿದಂತೆ ಎಲ್ಲ ಬಗೆಯ ಉದ್ಯಮಗಳಿಗೆ ಹೆಸರುವಾಸಿಯಾಗಿರುವ ಕರ್ನಾಟಕದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು – ಸುವ್ಯವಸ್ಥೆ ಉತ್ತಮವಾಗಿದೆ. ಫಾಕ್ಸ್ ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular