ಚಿಕ್ಕಮಗಳೂರು: ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಇಂದು ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ. ಮಲೆನಾಡು ನಾಗರೀಕ ರೈತ ಹಿತ ರಕ್ಷಣಾ ಸಮಿತಿ ಬಂದ್ ಗೆ ಕರೆ ನೀಡಿದ್ದು, ಶೃಂಗೇರಿ ಬಂದ್ ಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ.
ವಯನಾಡು ದುರಂತದ ಬಳಿಕ ಒತ್ತುವರಿ ತೆರವಿಗೆ ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಶೃಂಗೇರಿ, ಕೊಪ್ಪ, ಎನ್ಆರ್ ಪುರ,ಬಾಳೆಹೊನ್ನೂರು, ಖಾಂಡ್ಯಾ ಭಾಗದಲ್ಲಿ ಬಂದ್ ನಡೆಸಲಾಗಿದೆ.
ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಬಂದ್ ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದು, ವಾಹನ, ಜನ ಸಂಚಾರ ವಿರಳವಾಗಿತ್ತು. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಬೆಂಬಲ ಸೂಚಿಸಲಾಗಿದೆ.