HomeKarnatakaಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ಆರೋಪ: ವಿದೇಶಿ ಕಂಪನಿ ವಿರುದ್ಧದ ಪ್ರಕರಣ ರದ್ದು

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ಆರೋಪ: ವಿದೇಶಿ ಕಂಪನಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಉದ್ಯೋಗದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇರೆಗೆ ವಿದೇಶಿ ಕಂಪನಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಸ್ವಿಡ್ಜರ್ ಲೆಂಡ್ ನ ಜ್ಯೂರಿಚ್ ನಲ್ಲಿರುವ ಸ್ವಿಸ್ ರೀ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕ ಮತ್ತು ನಿಯಂತ್ರಣ ಮುಖ್ಯಸ್ಥ ಸೇರಿ ಇತರೆ 10 ಮಂದಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

ಪ್ರಕರಣದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ 7ನೇ ಆರೋಪಿ ನೋಯಲ್ ಡಿಸೋಜಾ ಎಂಬುವರ ವಿರುದ್ಧ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದ್ದು, ಅವರು ವಿಚಾರಣೆ ಎದುರಿಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೈಂಗಿಕ ಕಿರುಕುಳ ಆರೋಪ ಪ್ರಕರಣ ರದ್ದು ಮಾಡುವಂತೆ ಕೋರಿ ಸಂಸ್ಥೆಯ ನಿರ್ದೇಶಕ ಎಂ.ಎಸ್. ಸಬಿನೆ ಬೇಚ್ಲರ್ ಮೊದಲಾದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಪ್ರಕರಣದ ಸಂಬಂಧ ದಾಖಲಾದ ದೂರನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಎಲ್ಲಾ ಆರೋಪಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ದೂರು ದಾಖಲಾಗಿದೆ ಎಂಬ ಅಂಶ ಸ್ಪಷ್ಟವಾಗಲಿದೆ ಎಂದು ನ್ಯಾಯಪೀಠದ ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular