alex Certify BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ.

ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ.

ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...