alex Certify BREAKING : ವೈದ್ಯರ ಪ್ರತಿಭಟನೆ ಹಿನ್ನೆಲೆ ರಾಜ್ಯಾದ್ಯಂತ ‘OPD’ ಸೇವೆ ಬಂದ್, ರೋಗಿಗಳ ಪರದಾಟ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವೈದ್ಯರ ಪ್ರತಿಭಟನೆ ಹಿನ್ನೆಲೆ ರಾಜ್ಯಾದ್ಯಂತ ‘OPD’ ಸೇವೆ ಬಂದ್, ರೋಗಿಗಳ ಪರದಾಟ..!

ಬೆಂಗಳೂರು : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ & ಕೊಲೆ ಪ್ರಕರಣ ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಆಗಿದ್ದು, ರೋಗಿಗಳ ಪರದಾಟ ನಡೆಸುತ್ತಿದ್ದಾರೆ.

ರಾಜ್ಯದ ಹಲವು ಕಡೆ ಜಿಲ್ಲಾಸ್ಪತ್ರೆ ಒಪಿಡಿ ಸೇರಿದಂತೆ ಎಲ್ಲ ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಆಗಿವೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಇಂಡಿಯನ್ ಡೆಂಟಲ್ ಅಸೋಸಿಯೇಶನ್, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಜಿಲ್ಲಾ ಘಟಕದ ವತಿಯಿಂದ ಒಪಿಡಿ ಬಂದ್ ಮಾಡಲಾಗಿದೆ. ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ. ತುರ್ತು ಚಿಕಿತ್ಸೆ ಸಂಬಂಧಿಸಿದಂತೆ ಆದ್ಯತೆ ಮೇರೆಗೆ ಚಿಕಿತ್ಸೆಗೆ ನಿರ್ಧಾರ ಮಾಡಲಾಗಿದೆ.

ಡಯಾಲಿಸಿಸ್ ಚಿಕಿತ್ಸೆಗಾಗಿ ಬಂದ ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಸಿಗದೆ ವಾಪಸ್ ತೆರಳ್ತಿದ್ದಾರೆ. ಇಂದು ವೈದ್ಯರ ಪ್ರತಿಭಟನೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಸರ್ಕಾರಿ ವೈದ್ಯರಿಗೆ ಇಂದಿನ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...