HomeKarnatakaBREAKING NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

BREAKING NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು, ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆದಿದೆ.

ಪ್ರಧಾನಿ ಮೋದಿ, ಅಮಿತ್ ಶಾ, ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ರಾಜ್ಯ ಕುರುಬರ ಸಂಘ ಮಧ್ಯಾಹ್ನ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಹೋರಾಟಕ್ಕೆ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular