alex Certify ರಾಜ್ಯದ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’ : ‘ಮೆಟ್ರಿಕ್’ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’ : ‘ಮೆಟ್ರಿಕ್’ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ದೂ.ಸಂ.08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...