ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಖಾಸಗಿ ಕಾಲೇಜು ಆಡಳಿತ ಮಂಡಳಿ ಪ್ರತಿನಿಧಿಗಳು ಶೇಕಡ 15 ರಿಂದ 20 ರಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿದ್ದು, ಶೇ. 10ರಷ್ಟು ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಂಚಿಕೆ ಮಾಡುವ ಸರ್ಕಾರಿ ಕೋಟಾ ಸೀಟುಗಳಿಗೆ 1.40 ಲಕ್ಷ ರೂಪಾಯಿ, ಖಾಸಗಿ ಕೋಟಾ ಸೀಟುಗಳಿಗೆ 11.88 ಲಕ್ಷ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಸರ್ಕಾರಿ ಕೋಟಾ ಸೀಟುಗಳಿಗೆ 1.28 ಲಕ್ಷ ರೂ., ಖಾಸಗಿ ಕೋಟಾ ಸೀಟುಗಳಿಗೆ 9.94 ಲಕ್ಷ ರೂ. ಶುಲ್ಕವಿತ್ತು, ವೈದ್ಯಕೀಯ ಕಾಲೇಜುಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಾರ್ಷಿಕ 50 ಸಾವಿರ ರೂ. ಶುಲ್ಕ ಇರುತ್ತದೆ.