ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ.
ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ ತೇವಗೊಂಡಿದ್ದ ಮನೆಯ ಗೋಡೆ ಏಕಾಏಕಿ ಕುಸಿದು ದುರಂತ ಸಂಭವಿಸಿದೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.