alex Certify ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ: ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ: ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಮಾಗಡಿ: ಚಾರ್ಜ್ ಗೆ ಹಾಕಿದ್ದ ವೇಳೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಅಪಾರ ಹಾನಿ ಉಂಟಾದ ಘಟನೆ ಮಾಗಡಿಯಲ್ಲಿ ಭಾನುವಾರ ನಡೆದಿದೆ.

ಮಾಗಡಿಯ ನಿವಾಸಿ ಲಕ್ಷ್ಮಿ ನರಸಿಂಹ ಅವರು ಭಾನುವಾರ ಬೆಳಗ್ಗೆ 5 ಗಂಟೆಗೆ ತಮ್ಮ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಗೆ ಹಾಕಿ ಮಲಗಿದ್ದಾರೆ. ಕೆಲ ಸಮಯದ ನಂತರ ಸುಟ್ಟ ವಾಸನೆ ಬಂದಿದ್ದು, ಎದ್ದು ನೋಡುವಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸುವ ವೇಳೆ ಲಕ್ಷ್ಮಿ ನರಸಿಂಹ ಅವರ ಕೈಕಾಲು, ಮುಖಕ್ಕೆ ಬೆಂಕಿ ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಘಟನೆಯಿಂದಾಗಿ ಮನೆಯಲ್ಲಿದ್ದ ಯುಪಿಎಸ್, ವಾಷಿಂಗ್ ಮಷಿನ್ ಸೇರಿದಂತೆ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಹೋಗಿ ಅಪಾರ ನಷ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...