HomeKarnatakaಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ.

ಹೇಮಂತ್ ಬಂಧಿತ ಆರೋಪಿ. ಪರಿಚಿತ ಮಹಿಳೆಯನ್ನು ಬೈಕ್ ನಲ್ಲಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಹೇಮಂತ್ ನನ್ನು ವಶಕ್ಕೆ ಪಡೆಯಲಾಗಿದೆ. ಶನಿವಾರ ರಾತ್ರಿ ಅವಿವಾಹಿತ ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರ ಎಸಗಿದ್ದು, ನಿತ್ರಾಣ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯ ನಿವಾಸಿಗಳು ಗಮನಿಸಿ ಯಾದಗಿರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಲಬುರಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಲಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿ ಹೇಮಂತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular