HomeIndiaನಾಚಿಕೆಗೇಡಿ ಘಟನೆ: ವಿದ್ಯಾರ್ಥಿನಿಯರಿಗೆ ಶಾಲೆಯಲ್ಲೇ 'ಅಶ್ಲೀಲ ವಿಡಿಯೋ' ತೋರಿಸಿ ಅನುಚಿತವಾಗಿ ವರ್ತಿಸಿದ ಶಿಕ್ಷಕ....!

ನಾಚಿಕೆಗೇಡಿ ಘಟನೆ: ವಿದ್ಯಾರ್ಥಿನಿಯರಿಗೆ ಶಾಲೆಯಲ್ಲೇ ‘ಅಶ್ಲೀಲ ವಿಡಿಯೋ’ ತೋರಿಸಿ ಅನುಚಿತವಾಗಿ ವರ್ತಿಸಿದ ಶಿಕ್ಷಕ….!

ಅಸ್ಸಾಂನಲ್ಲೊಂದು ನಾಚಿಕೆಗೇಡಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ್ದು, ಆದರೆ ಆರೋಪಿ ಶಿಕ್ಷಕ ಕೈಗೆ ಸಿಗದ ಕಾರಣ ಕೋಪೋದ್ರಿಕ್ತರಾಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ.

ಈ ಘಟನೆ ಅಸ್ಸಾಂನ ಕರಿಂ ಗಂಜ್ ಜಿಲ್ಲೆಯಲ್ಲಿ ಆಗಸ್ಟ್ 12ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ 37 ವರ್ಷದ ಈ ಶಿಕ್ಷಕ ಶಾಲಾ ಅವಧಿಯಲ್ಲಿ ತನ್ನ ಮೊಬೈಲಿನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲ, ಈ ವಿಡಿಯೋವನ್ನು ವಿದ್ಯಾರ್ಥಿನಿಯರಿಗೆ ತೋರಿಸಿದ್ದು, ಜೊತೆಗೆ ಓರ್ವ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ.

ಇದರಿಂದ ಗಾಬರಿಗೊಂಡ ವಿದ್ಯಾರ್ಥಿನಿ ಮನೆಗೆ ಬಂದು ತನ್ನ ಪೋಷಕರಿಗೆ ಈ ವಿಷಯ ತಿಳಿಸಿದ್ದು, ಬಳಿಕ ಎಲ್ಲರೂ ಒಟ್ಟಾಗಿ ಶಾಲೆಗೆ ಹೋಗಿದ್ದಾರೆ. ಆದರೆ ಆರೋಪಿ ಶಿಕ್ಷಕ ಪರಾರಿಯಾಗಿದ್ದು, ಬಳಿಕ ಶಾಲೆಯಲ್ಲಿದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನ ಬಂಧನಕ್ಕೆ ಮುಂದಾಗಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ ಸಹ ಆರೋಪಿ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular