ಬೆಂಗಳೂರು : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ.
ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ವಾದ ವಿವಾದ ಆಲಿಸಿದ ಹೈಕೋರ್ಟ್ ಆ.29 ಕ್ಕೆ ವಿಚಾರಣೆ ಮುಂದೂಡಿದೆ. ಹಾಗೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೂ ತಾತ್ಕಾಲಿಕವಾಗಿ ಕೋರ್ಟ್ ತಡೆ ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಾದ ಮತ್ತು ಪ್ರತುವಾದಗಳನ್ನು ಆಲಿಸಿ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿಕ ಮಾಡಲಾಯಿತು., ಆ.29ರ ಒಳಗಾಗಿ ಸೆಷನ್ಸ್ ಕೋರ್ಟ್ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ಆದೇಶಗಳನ್ನು ಹೊರಡಿಸುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಾಧೀಶರು ಮಧ್ಯಂತರ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಲೀಫ್ ಸಿಕ್ಕಂತಾಗಿದೆ.
ಏನಿದು ಮುಡಾ ಭೂ ಹಗರಣ?
ವಿವಾದವು ೩.೧೬ ಎಕರೆ ಭೂಮಿಯ ಮೇಲೆ ಕೇಂದ್ರೀಕೃತವಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಒಡೆತನದ ಕೆಸರು ಗ್ರಾಮದಲ್ಲಿ. ಈ ಭೂಮಿಯನ್ನು ಲೇಔಟ್ ಅಭಿವೃದ್ಧಿಗಾಗಿ ಮುಡಾ ಸ್ವಾಧೀನಪಡಿಸಿಕೊಂಡಿತು ಮತ್ತು ಪಾರ್ವತಿಗೆ 2022 ರಲ್ಲಿ ವಿಜಯನಗರದಲ್ಲಿ 50:50 ಯೋಜನೆಯಡಿ ಪರಿಹಾರವಾಗಿ 14 ಪ್ರೀಮಿಯಂ ಸೈಟ್ಗಳನ್ನು ಹಂಚಿಕೆ ಮಾಡಲಾಯಿತು.ಆದರೆ, ಮುಡಾ ಸ್ವಾಧೀನಪಡಿಸಿಕೊಂಡ ಭೂಮಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ಮಂಜೂರು ಮಾಡಿದ ನಿವೇಶನವು ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.