ವಿಜಯನಗರ : ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಹಿನ್ನೆಲೆ ನದಿ ಪಾತ್ರದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ನ್ನು ಜಿಲ್ಲಾಡಳಿತ ವಾಪಸ್ ತೆಗೆದುಕೊಂಡಿದೆ.
ಗೇಟ್ ದುರಸ್ತಿ ಕಾರ್ಯ ನಡೆಯುವಾಗ ಕುತೂಹಲದಿಂದ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಹಿನ್ನೆಲೆ ವಿಜಯನಗರ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿತ್ತು, ಇದೀಗ ನದಿ ಪಾತ್ರದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ನ್ನು ಜಿಲ್ಲಾಡಳಿತ ವಾಪಸ್ ತೆಗೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಧನ್ಯವಾದ ತಿಳಿಸಿದ ಸರ್ಕಾರ
ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರಿಗೆ ಹಾಗೂ ಈ ಕಾರ್ಯದಲ್ಲಿ ಅವಿರತ ಶ್ರಮಿಸಿದ ಎಲ್ಲಾ ಇಂಜಿನಿಯರರಿಗೆ, ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ, ಕಾರ್ಮಿಕರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.