HomeKarnatakaರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : JEE/NEET ಪರೀಕ್ಷೆ ತರಬೇತಿಗೆ ಅರ್ಜಿ ಅಹ್ವಾನ.!

ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : JEE/NEET ಪರೀಕ್ಷೆ ತರಬೇತಿಗೆ ಅರ್ಜಿ ಅಹ್ವಾನ.!

ಬೆಂಗಳೂರು : (JEE/NEET MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25.08.2024 ಸಂಜೆ 5:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in . ವೀಕ್ಷಿಸಬಹುದಾಗಿದೆ.

ವಿಶೇಷ ಸೂಚನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳನ್ನು ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮಾತ್ರ ನೀಡಲಿದ್ದು ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್ರೂಂ (ಆಫ್ಲೈನ್) ಅಥವಾ ಆನ್ಲೈನ್ ಮೂಲಕ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಸೂಚನೆಗಳು:
> ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
> ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಯ ಜಾತಿಗೆ ಸೇರಿರಬೇಕು.
> ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.6.00 ಲಕ್ಷಗಳು,
> ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹೆಸರಿನಲ್ಲಿಯೇ ಇರಬೇಕು.
> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು
ಇಚ್ಛಿಸುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ/10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
> ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಇತರ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25.08.2024ರ ಸಂಜೆ 5:00 ಗಂಟೆ ಸಹಾಯವಾಣಿ :8050770004
(ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular