ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಮೋಹನ್ ತಳವಾರ (52) ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮೋಹನ್ ಕಿಣೆಯ ಗ್ರಾಮ ಪಂಚಾಯತ್ ಹೋಗಿ ಬೈಕ್ ನಲ್ಲಿ ವಾಪಸ್ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಬರ್ಬರವಾಗಿ ಕೊಂದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಗ್ರಾಮದ ಜನ ಬೆಚ್ಚಿ ಬಿದ್ದಿದ್ದಾರೆ.