alex Certify BIG NEWS : ರಾಜ್ಯದಲ್ಲಿ ವೈದ್ಯರ ಸುರಕ್ಷತೆಗೆ ಕಾರ್ಯಪಡೆ ರಚನೆ : ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ವೈದ್ಯರ ಸುರಕ್ಷತೆಗೆ ಕಾರ್ಯಪಡೆ ರಚನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಪಡೆಯಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು. ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕಾನೂನು (ತಿದ್ದುಪಡಿ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ಅಗೌರವ ತೋರಿದರೆ, ಕೆಟ್ಟದಾಗಿ ಮಾತನಾಡಿದರೆ ಮತ್ತು ಹಿಂಸಾಚಾರ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಇದು ಜಾಮೀನುರಹಿತ ಅಪರಾಧ. 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು. ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡರೂ ಜಾಮೀನುರಹಿತ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...