alex Certify ವಿವಿಧ ಖಾಯಿಲೆ ಪೀಡಿತರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಖಾಯಿಲೆ ಪೀಡಿತರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅರ್ಜಿ

ಧಾರವಾಡ: 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಪಿ, ಪಾರ್ಕಿನ್ಸನ್ ಹಾಗೂ ಮಲ್ಟಿಪಲ್ ಸ್ಕ್ಲೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

ಯೋಜನೆ ಅನ್ವಯ ವಿಶಿಷ್ಟ ಗುರುತಿನ ಚೀಟಿ(ಯು.ಡಿ.ಐ.ಡಿ ಕಡ್ಡಾಯ)ಯನ್ನು ಹೊಂದಿರುವ ಶೇ.75%ಕ್ಕಿಂತ ಹೆಚ್ಚಿನ ವಿಕಲತೆಯನ್ನು ಹೊಂದಿರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ ಫಲಾನುಭವಿಗಳು ಸೆಪ್ಟೆಂಬರ್ 20, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಗೆ ಅಥವಾ ತಾಲೂಕಾ ಪಂಚಾಯತಗಳಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು(ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...