alex Certify H.D.ಕುಮಾರಸ್ವಾಮಿಯನ್ನು ಬಂಧಿಸೋಕೆ ‘100 ಸಿದ್ದರಾಮಯ್ಯ’ ಬೇಕಾಗಿಲ್ಲ, ಒಬ್ಬ ಪೊಲೀಸ್ ಪೇದೆ ಸಾಕು : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

H.D.ಕುಮಾರಸ್ವಾಮಿಯನ್ನು ಬಂಧಿಸೋಕೆ ‘100 ಸಿದ್ದರಾಮಯ್ಯ’ ಬೇಕಾಗಿಲ್ಲ, ಒಬ್ಬ ಪೊಲೀಸ್ ಪೇದೆ ಸಾಕು : CM ಸಿದ್ದರಾಮಯ್ಯ

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ, ಒಬ್ಬ ಪೊಲೀಸ್ ಪೇದೆ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು. ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕೆ ಆಗಲ್ಲ ಎಂಬ ಕುಮಾರಸ್ವಾಮಿಯವರ ಮಾತು ಹಾಸ್ಯಾಸ್ಪದವಾಗಿದೆ.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಹೊರತು ನನ್ನದಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲೀ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಮುಖ್ಯಮಂತ್ರಿ ಅಥವಾ ಮಂತ್ರಿಯಾಗಿರಲಿಲ್ಲ.

ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು ಅವುಗಳನ್ನು ಬಿಡುಗಡೆ ಮಾಡಬೇಕು. ಮುಡಾ ವಿಚಾರದಲ್ಲಿ ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು, ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು? ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...