HomeKarnatakaಗಮನಿಸಿ : 'K-SET' ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ |K-SET 2024...

ಗಮನಿಸಿ : ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ |K-SET 2024 Exam

ಬೆಂಗಳೂರು : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಆಗಸ್ಟ್ 30 ಕೊನೆ ದಿನ. ಇದರ ನಂತರ ವಿಸ್ತರಣೆ ಇರುವುದಿಲ್ಲ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 28.08.2024
2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30.08.2024
ಸೂಚನೆ : ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 13.07.2024 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular