HomeKarnatakaALERT : ಪಡಿತರ ಚೀಟಿದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ 'BPL'...

ALERT : ಪಡಿತರ ಚೀಟಿದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ಆಗಸ್ಟ್ 31 ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.

ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಇಕೆವೈಸಿ ಮಾಡಿಸದಿದ್ದಲ್ಲಿ ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತದೆ. ಇಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ ಎಂದು ಪಡಿತರ ಚೀಟಿದಾರರ ಗಮನಕ್ಕೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚಿಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆರು ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular