ಬೆಂಗಳೂರು : ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ವಾರದಲ್ಲಿ ನಾಲ್ಕು ದಿನ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.
ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ಕಣ್ಣಿಡಲಿದ್ದಾರೆ. ಒಂದು ವೇಳೆ ಸಿಕ್ಕಿ ಹಾಕಿಕೊಂಡ್ರೆ ದಂಡ ಫಿಕ್ಸ್.ಗಾಡಿ ಸೀಜ್. ಒಂದು ವೇಳೆ ನೀವು ಕುಡಿದು ಗಾಡಿ ಚಲಾಯಿಸಿದ್ರೆ ಅಷ್ಟೇ ಕತೆ..ಪೊಲೀಸರು ನಿಮ್ಮ ಗಾಡಿಯನ್ನು ಸೀಜ್ ಮಾಡಿ ಕೇಸ್ ಹಾಕಲಿದ್ದಾರೆ.
ಸವಾರರು/ಚಾಲಕರು ಗಳ ವಿರುದ್ದ ಪ್ರತಿವಾರ ಠಾಣೆಯ ಎಲ್ಲ ಸಬ್ ಇನ್ಸ್ಪೆಕ್ಟರ್ ಗಳು ಕಡ್ಡಾಯವಾಗಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಬೇಕು ಎಂದು ಜಂಟಿ ಆಯುಕ್ತ (ಸಂಚಾರ) ಅನುಚೇತ್ ಸೂಚಿಸಿದ್ದಾರೆ. ಈ ಸಮಯದಲ್ಲಿ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ಸಹ ಕಾರ್ಯಾಚರಣೆಗೆ ನೇಮಿಸಬೇಕು ಎಂದು ಹೇಳಿದ್ದಾರೆ.