HomeIndiaBIG NEWS: ಶಾಲಾ ಮಕ್ಕಳ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

BIG NEWS: ಶಾಲಾ ಮಕ್ಕಳ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

ಪಾಟ್ನಾ: ಭಾರತ್ ಬಂದ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶಾಲಾ ಮಕ್ಕಳು ತೆರಳುತ್ತಿದ್ದ ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಹಾರದ ಗೋಪಾಲಗಂಜ್ ನಲ್ಲಿ ಉದ್ರಿಕ್ತರ ಗುಂಪು ಶಾಲಾ ಮಕ್ಕಳ ಬಸ್ ಗೆ ಬೆಂಕಿ ಹಚ್ಚಲು ಮುಂದಾಗಿದೆ. ಈ ವೇಳೆ ಪೊಲೀಸರು ತಕ್ಷಣ ಮಧ್ಯಪ್ರವೇಶ ಮಾಡಿ ತಡೆದಿದ್ದು, ಅನಾಹುತ ತಪ್ಪಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಖಂಡಿಸಿ ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಬಂದ್ ಪ್ರತಿಭಟನೆ ವೇಳೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಬಿಹಾರದ ಗೋಪಾಲಗಂಜ್ ಮಾರ್ಗವಾಗಿ ಬಂದಿದೆ. ರೊಚ್ಚಿಗೆದ್ದ ಪ್ರತಿಭಟನಾಕಾರರು ಬಸ್ ಸುತ್ತುವರೆದು, ಬಸ್ ಚಕ್ರದ ಕೆಳಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ತಕ್ಷಣ ಎಚ್ಚೆತ್ತ ಪೊಲಿಸರು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ ಪ್ರತಿಭಟನಾಕಾರರನ್ನು ಗುರುತಿಸಿ ಶೀಘ್ರದಲ್ಲಿ ಬಂಧಿಸುವುದಾಗಿ ಪೊಲಿಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular