ಬೆಂಗಳೂರು : ಬೆಂಗಳೂರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ‘ಕಾವೇರಿ’ ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಲಿದೆ. ಕಾವೇರಿ’ ನೀರಿನ ದರ ಹೆಚ್ಚಳದ ಬಗ್ಗೆ ಸದ್ಯದಲ್ಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಕಮಿಟಿ ಸಭೆ ಮತ್ತು ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ಜಲಮಂಡಳಿ ನಷ್ಟದಲ್ಲಿದೆ. ಸಂಬಳ ಕೊಡಲು ಆಗುತ್ತಿಲ್ಲ. ವಿದ್ಯುತ್ ಬಿಲ್ ಕೂಡ ಪಾವತಿ ಮಾಡಲು ಆಗುತ್ತಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.