HomeEntertainment25 ದಿನ ಪೂರೈಸಿದ ದುನಿಯಾ ವಿಜಯ್ ನಟನೆಯ 'ಭೀಮ'

25 ದಿನ ಪೂರೈಸಿದ ದುನಿಯಾ ವಿಜಯ್ ನಟನೆಯ ‘ಭೀಮ’

ಆಗಸ್ಟ್ 9ರಂದು ರಾಜ್ಯದ್ಯಂತ ತೆರೆ ಕಂಡಿದ್ದ ‘ಭೀಮ’ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಮನೆ ಮಾತಾಗಿದೆ. ದುನಿಯಾ ವಿಜಯ್ ಹಾಗೂ ನಾಯಕಿ ಅಶ್ವಿನಿ ಅವರ ನಟನೆಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ. ಭೀಮ ಸಿನಿಮಾ ಇದೀಗ 25 ದಿನಗಳನ್ನು ಪೂರೈಸಿದ್ದು, ಈ ಸಂತಸವನ್ನು ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ದುನಿಯಾ ವಿಜಯ್ ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಈ ಚಿತ್ರವನ್ನು ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ನಿರ್ಮಾಣ ಮಾಡಿದ್ದು, ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ದುನಿಯಾ ವಿಜಯ್ ಸೇರಿದಂತೆ ಅಶ್ವಿನಿ, ಪ್ರಿಯಾ ಶತಮರ್ಶನ್, ಕಲ್ಯಾಣಿ ರಾಜು, ಕಾಕ್ರೋಚ್ ಸುಧಿ, ಅಚ್ಯುತ್ ಕುಮಾರ್, ಗೋಪಾಲ ಕೃಷ್ಣ ದೇಶಪಾಂಡೆ ಬಣ್ಣ ಹಚ್ಚಿದ್ದಾರೆ. ಚೇತನ್ ಡಿಸೋಜಾ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ಶಿವಸೇನಾ ಅವರ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular