ಆಲೂಗಡ್ಡೆಯ ತಿನಿಸುಗಳು ಮಕ್ಕಳಿಗೆ ಫೇವರಿಟ್. ಆಲೂ ಚಿಪ್ಸ್, ಫ್ರೆಂಚ್ ಫ್ರೈಸ್, ಟಿಕ್ಕಿ ಇವನ್ನೆಲ್ಲ ಮಕ್ಕಳು ಇಷ್ಟಪಟ್ಟು ತಿಂತಾರೆ. ಆದರೆ ಆಲೂಗಡ್ಡೆಯನ್ನು ಎಣ್ಣೆಯಲ್ಲಿ ಕರಿದು ಕೊಡುವುದಕ್ಕಿಂತ ಬೇಯಿಸಿದ ಆಲೂಗಡ್ಡೆ ಉತ್ತಮ. ಆಲೂ ಕಾರ್ಬೋಹೈಡ್ರೇಟ್‌ಗಳ ಪ್ರಮುಖ ಮೂಲವೆಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಅನೇಕ ಪೋಷಕಾಂಶಗಳೂ ಇವೆ.
ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿ
ಬೇಯಿಸಿದ ಆಲೂಗಡ್ಡೆ ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ. ಹಾಗಾಗಿ ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ನಿವಾರಿಸಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ತೂಕ ನಷ್ಟಕ್ಕೆ ಸಹಾಯಕ
ಆಲೂಗಡ್ಡೆ ತೂಕ ಹೆಚ್ಚಿಸುತ್ತದೆ ಎಂಬ ಭಾವನೆ ಅನೇಕರಲ್ಲಿದೆ. ಆದರೆ ಇದು ನಿಜವಲ್ಲ. ಬೇಯಿಸಿದ ಆಲೂಗಡ್ಡೆಯಲ್ಲಿ ಕ್ಯಾಲೋರಿ ಕಡಿಮೆ ಮತ್ತು ಹೆಚ್ಚಿನ ಫೈಬರ್ ಇರುತ್ತದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತಿಡುತ್ತದೆ. ಆಗಾಗ್ಗೆ ತಿನ್ನುವ ಬಯಕೆಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ತೂಕ ನಷ್ಟಕ್ಕೆ ಸಹಕಾರಿಯಾಗಿದೆ.
ಸ್ನಾಯುಗಳಿಗೆ ಪ್ರಯೋಜನಕಾರಿ
ಬೇಯಿಸಿದ ಆಲೂಗಡ್ಡೆಯಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್ ಇರುತ್ತದೆ. ಇದು ಸ್ನಾಯುಗಳ ಕಾರ್ಯಕ್ಕೆ ಅವಶ್ಯಕ. ಸ್ನಾಯು ನೋವು ಮತ್ತು ಸೆಳೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಬೇಯಿಸಿದ ಆಲೂಗಡ್ಡೆಯಲ್ಲಿರುವ ವಿಟಮಿನ್ ಬಿ 6 ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ಹೃದಯದ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ ಹೋಮೋಸಿಸ್ಟೈನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಚರ್ಮಕ್ಕೆ ಪ್ರಯೋಜನಕಾರಿ
ಬೇಯಿಸಿದ ಆಲೂಗೆಡ್ಡೆಯಲ್ಲಿರುವ ವಿಟಮಿನ್ ಸಿ ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ, ತ್ವಚೆಯ ಹೊಳಪು ಹೆಚ್ಚಿಸುತ್ತದೆ.
ರಕ್ತದೊತ್ತಡ ನಿಯಂತ್ರಣ
ಬೇಯಿಸಿದ ಆಲೂಗಡ್ಡೆಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಅಧಿಕ ರಕ್ತದೊತ್ತಡದ ಸಮಸ್ಯೆ ಇರುವವರು ಇದನ್ನು ನಿಯಮಿತವಾಗಿ ಸೇವನೆ ಮಾಡಬಹುದು.
ಮೆದುಳಿನ ಆರೋಗ್ಯ
ಮೆದುಳಿನ ಆರೋಗ್ಯಕ್ಕೆ ಕೂಡ ಬೇಯಿಸಿದ ಆಲೂಗಡ್ಡೆ ಒಳ್ಳೆಯದು. ಇದರಲ್ಲಿರುವ ವಿಟಮಿನ್ ಬಿ6 ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ ಮತ್ತು ನೆನಪಿನ ಶಕ್ತಿಯನ್ನು ಸುಧಾರಿಸುತ್ತದೆ.
ಮೂಳೆಗಳನ್ನು ಬಲಪಡಿಸುತ್ತದೆ
ಬೇಯಿಸಿದ ಆಲೂಗಡ್ಡೆಯಲ್ಲಿರುವ ವಿಟಮಿನ್ ಸಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.
ಶಕ್ತಿಯ ಉತ್ತಮ ಮೂಲ
ಉತ್ತಮ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುವುದರಿಂದ ಬೇಯಿಸಿದ ಆಲೂಗಡ್ಡೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಆಯಾಸ ಮತ್ತು ದೌರ್ಬಲ್ಯವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ಇವೆಲ್ಲದರ ಜೊತೆಗೆ ಅಗ್ಗದ ಬೆಲೆಗೆ ಲಭ್ಯವಾಗುವ ತರಕಾರಿ ಇದು. ಹಾಗಾಗಿ ಬಡ ಮಧ್ಯಮ ವರ್ಗದವರು ಕೂಡ ಖರೀದಿಸಬಹುದು. ಆಲೂಗಡ್ಡೆಯನ್ನು ಬೇಯಿಸಿ ರುಚಿಕರವಾದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಬಹುದು.