HomeKarnatakaBIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ.

26 ವರ್ಷದ ಹೆಚ್.ಎನ್.ಶರತ್ ಮೃತ ಯುವಕ. ಜಂಬರಗಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ದ್ವಾರ ಬಾಗಿಲು ಕಾಮಗಾರಿ ನಡೆಯುತ್ತಿದ್ದು, ದ್ವಾರದ ವಿಗ್ರಹದ ಕೆಲಸವನ್ನು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಶಾಕ್ ಹೊಡೆದಿದೆ.

ತಕ್ಷಣ ಶರತ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular