HomeEntertainmentBREAKING : ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ನಟಿ ರಚಿತಾ ರಾಮ್

BREAKING : ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ನಟಿ ರಚಿತಾ ರಾಮ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗಾಗಿ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಸೇರಿದ್ದು, ನಟಿ ರಚಿತಾ ರಾಮ್, ಇತ್ತೀಚೆಗೆ ದರ್ಶನ್ ಪರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಕೊಲೆ ಆರೋಪಿ ದರ್ಶನ್ ಅವರನ್ನು ನೋಡಲೆಂದು ಇದೀಗ ರಚಿತಾ ರಾಮ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ್ದಾರೆ.

ದರ್ಶನ್ ಆಪ್ತ ಸಚ್ಚಿದಾನಂದ ಜೊತೆ ರಚಿತಾ ರಾಮ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಅವರಿಗೆ ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ರುದ್ರೇಶ್ ಕೂಡ ಸಾಥ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular