BIG NEWS: ರಾಜ್ಯದ 40 ಕೆರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ: ಏತ ನೀರಾವರಿಗೆ ಬಳಸಲು ಯೋಜನೆ

ಬೆಂಗಳೂರು: ರಾಜ್ಯದ 40 ಕೆರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 10 ತಿಂಗಳಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ನಿರೀಕ್ಷೆಯಿದ್ದು, ಈ ವಿದ್ಯುತ್ ಅನ್ನು ಏತ ನೀರಾವರಿಗೆ ಬಳಸಲು ಯೋಜನೆ ರೂಪಿಸಲಾಗಿದೆ.

ಕೆರೆಗಳಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಯೋಜನೆಗೆ ಜಾರಿಗೆ ಸಣ್ಣ ನೀರಾವರಿ ಇಲಾಖೆ ಕ್ರಮ ಕೈಗೊಂಡಿದೆ. ಜಲಾಶಯಗಳ ಹಿನ್ನೀರು, ಬೃಹತ್ ಕೆರೆಗಳು ಸೇರಿದಂತೆ ಇತರೆ ಜಲಮೂಲಗಳಲ್ಲಿ ಸೌರ ಶಕ್ತಿ ಉತ್ಪಾದನಾ ಪ್ಯಾನೆಲ್ ಗಳನ್ನು ಅಳವಡಿಸುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದ್ದು, ಜಲ ಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ ಜಂಟಿಯಾಗಿ ಯೋಜನೆ ಸಿದ್ಧಪಡಿಸುತ್ತಿವೆ.

ಸಣ್ಣ ನೀರಾವರಿ ಇಲಾಖೆಯ ಏತ ನೀರಾವರಿ ಯೋಜನೆಗಳಿಗೆ ಮಾಸಿಕ 10 ರಿಂದ 14 ಕೋಟಿ ರೂ. ವಿದ್ಯುತ್ ಬಳಕೆ ಶುಲ್ಕ ಪಾವತಿಸುತ್ತಿದ್ದು, ಸೌರ ವಿದ್ಯುತ್ ಉತ್ಪಾದನೆ ಪ್ಯಾನೆಲ್ ಅಳವಡಿಸುವುದರಿಂದ ಉತ್ಪಾದನೆ ಆಗುವ ವಿದ್ಯುತ್ ಅನ್ನು ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸಲು ಬಳಕೆ ಮಾಡಲಾಗುವುದು.

ವರ್ಷಪೂರ್ತಿ ಅರ್ಧ ತುಂಬಿರುವ 200 ಎಕರೆಗೂ ಹೆಚ್ಚಿನ ವಿಸ್ತೀರ್ಣದ ಕೆರೆಗಳನ್ನು ಗುರುತಿಸಲಾಗಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಯ ಕೆರೆಗಳನ್ನು ಮಾತ್ರ ಗುರುತಿಸಿದ್ದು, ಇತರೆ ಜಿಲ್ಲೆಗಳಲ್ಲಿ ಕೆರೆಗಳನ್ನು ಗುರುತಿಸುವ ಕಾರ್ಯ ನಡೆದಿದೆ. ಇವುಗಳಿಂದ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read