ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶಿವಮೊಗ್ಗ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಚಂದ್ರಶೇಖರ್ ಅವರು ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಶಿವಮೊಗ್ಗ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ
ಚಂದ್ರಶೇಖರ್ ಆತ್ಮಹತ್ಯೆಗೆ ನಿಗಮದ ಎಂ. ಡಿ. ಪದ್ಮನಾಭನ್ ಮತ್ತು ಪರಶುರಾಮ್ ಕಾರಣ ಎಂದು ಚಾರ್ಜ್ ಶೀಟ್ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಚಂದ್ರಶೇಖರ್ ಅವರು ಕೂಡ ನಿಗಮದ ಹಗರಣದಲ್ಲಿ ಹಣವನ್ನು ಪಡೆದಿದ್ದರು ಎಂದು ಹೇಳಲಾಗಿದೆ.
ಚಂದ್ರಶೇಖರ್ ಅವರನ್ನು ಗೋವಾ ಮತ್ತು ಹೈದ್ರಾಬಾದ್ ಗೆ ಕರೆದುಕೊಂಡು ಹೋದ ಪದ್ಮನಾಭ ಮತ್ತು ಪರಶುರಾಮ್ ಅವರು ಬೆದರಿಕೆ ಹಾಕಿದ್ದರು. ನೀನು ಹಣ ಪಡೆದಿದ್ದೀಯಾ ಪ್ರಕರಣ ಬೆಳಕಿಗೆ ಬಂದರೆ ನೀನು ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾವೇ ದೂರು ಕೊಡ್ತೀವಿ. ಹೀಗಾಗಿ ಪ್ರಕರಣ ಬೆಳಕಿಗೆ ಬಂದು ಸಿಕ್ಕಿಬೀಳುವ ಭಯಕ್ಕೆ ಒಳಗಾದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಅಧಿಕಾರಿಗಳಾದ ಪದ್ಮನಾಭ್, ಪರುಶರಾಮ್ ಅವರ ಒತ್ತಡದಿಂದ ಮನನೊಂದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ನಂತರ ಸರ್ಕಾರ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತು ಮಾಡಿತ್ತು.