alex Certify Rain Alert Karnataka : ರಾಜ್ಯದಲ್ಲಿ ಆ.28 ರವರೆಗೂ ‘ಮಳೆ’ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ರಾಜ್ಯದಲ್ಲಿ ಆ.28 ರವರೆಗೂ ‘ಮಳೆ’ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಆ.28 ರವರೆಗೂ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದೆ.ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ಹಾಗೂ 26 ರಂದು ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿರುವ ಹಿನ್ನೆಲೆ ಅತಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲಿ ಈ ವಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...