ಮೂಡುಬಿದಿರೆ: ಅಪ್ರಾಪ್ತ ಪುತ್ರಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗೆ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಹೊರವಲಯದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದ್ದು ಆರೋಪಿ ತಂದೆಯನ್ನು ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.
55 ವರ್ಷದ ಆರೋಪಿ ಕೂಲಿ ಕಾರ್ಮಿಕನಾಗಿದ್ದು, ಆರು ತಿಂಗಳ ಹಿಂದೆ ಮನೆಯಲ್ಲಿ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರೌಢಶಾಲೆ ಓದುತ್ತಿರುವ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಆರೋಪಿಯೇ ಕರೆದುಕೊಂಡು ಹೋಗಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರು ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ತನಿಖೆಯ ದಾರಿ ತಪ್ಪಿಸಲು ಬೇರೆಯವರ ಹೆಸರು ಹೇಳಿದ್ದ ಆರೋಪಿ ವಿಚಾರಣೆಯ ಬಳಿಕ ಕೃತ್ಯ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.