alex Certify ರಾಜ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses)., ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”., “ಶುಲ್ಕ ಮರುಪಾವತಿ” ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಸೆಪ್ಟೆಂಬರ್ 15 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005, ಇ-ಮೇಲ್ bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnatak.gov.in ಅಥವಾ ದೂರವಾಣಿ ಸಂಖ್ಯೆ 1902, ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿವಿ ಟವರ್, ಅಂಬೇಡ್ಕರ್ ವೀದಿ ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...