HomeKarnatakaBIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ...

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕೆಲ ದಿನಗಳ ಹಿಂದಷ್ಟೇ ರಾಜ್ಯಾದ್ಯಂತ ಮುಷ್ಕರ ನಡೆಸಿದ್ದರು. ಶೇ.100ರಷ್ಟು ಸ್ಟೈ ಫಂಡ್ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರನಪ್ರಕಾಶ್ ಪಾಟೀಲ್ ಶಿಶ್ಯವೇತನ ಹೆಚ್ಚಳ ಮಾಡುವ ಬಗ್ಗೆ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಾಸ್ ಪಡೆದಿದ್ದರು.

ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಸ್ಟೈ ಫಂಡ್ ಹೆಚ್ಚಳ ಮಾಡಿದೆ. ಆದರೆ ಶೇ.25ರಷ್ಟು ಸ್ಟೈ ಫಂಡ್ ಹೆಚ್ಚಳ ಮಾಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular