ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಮಾಡಿದ್ದ ಉದ್ಯೋಗ ಮೇಳಕ್ಕೆ ಉತ್ತಮ ರೆಸ್ಪಾನ್ಸ್ ಬಂದಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಎಲ್ಲಾ ಕಡೆ ಉದ್ಯೋಗ ಮೇಳ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ಚನ್ನಪಟ್ಟಣದಲ್ಲಿ ಆಗಸ್ಟ್ 30ಕ್ಕೆ ಉದ್ಯೋಗ ಮೇಳ ಮಾಡುತ್ತಿದ್ದೇವೆ ಎಂದು ಶರಣ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ರಾಮನಗರ ಇವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದೆ. . ಆಸಕ್ತರು ನೋಂದಣಿ ಮಾಡಿಕೊಳ್ಳಲು https://skillconnect.kaushalkar.com/ ಲಿಂಕ್ ಅನ್ನು ಬಳಕೆ ಮಾಡಬಹುದು.
ಅರ್ಹತೆ : ಎಸ್ಎಸ್ಎಲ್ಸಿ (ಉತ್ತೀರ್ಣ/ ಅನುರ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದು