HomeKarnatakaBIG NEWS: ಬಿಜೆಪಿಯವರ ಮಾತನ್ನೇ ರಾಜ್ಯಪಾಲರು ಕೆಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕಿರಬೇಕು? ಡಿಸಿಎಂ ಆಕ್ರೋಶ

BIG NEWS: ಬಿಜೆಪಿಯವರ ಮಾತನ್ನೇ ರಾಜ್ಯಪಾಲರು ಕೆಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕಿರಬೇಕು? ಡಿಸಿಎಂ ಆಕ್ರೋಶ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿಯವರ ಮಾತುಗಳನ್ನು ಕೇಳಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರ ಮಾತುಕೇಳಿ 15 ಬಿಲ್ ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಪಾಲರು ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular