![](https://kannadadunia.com/wp-content/uploads/2024/08/wonderla.jpg)
ರಾಮನಗರ: ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇಂಗ್ಲೀಷ್ ಹಾಗೂ ಉರ್ದು ಭಾಷೆಯಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವನಿಸಲಾಗಿದೆ ಎಂದು ತಿಳಿದುಬಂದಿದೆ.
ರಾಮನಗರದ ಬಿಡದಿ ಬಳಿಯಿರುವ ವಂದರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಆಗಸ್ಟ್ 3ರಂದು ಬಾಂಬ್ ಬೆದರಿಕೆ ಸಂದೇಶ ಬಂದ್ದು, ತಡವಾಗಿ ಬೆಳಕಿಗೆ ಬಂದಿದೆ. ವಂಡರ್ ಲಾ ಸಿಬ್ಬಂದಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ಮೊಹಮ್ಮದ್ ಇರ್ಫಾನ್ ಜಿಹಾದಿ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಭಾನುವಾರ ವಂಡರ್ ಲಾದಲ್ಲಿ ಮೂರು ಬಾಂಬ್ ಸ್ಫೋಟಗೊಳ್ಳಲಿದೆ. ಮುಸ್ಲೀಂರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಶಿಕ್ಷೆಯಾಗಲಿದೆ. ಕನ್ನಡದ ಕಾಫೀರರಿಗೆ ಶಿಕ್ಷೆಯಾಗಲಿದೆ ಎಂದು ಬೆದರಿಕೆ ಹಾಕಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವಂಡರ್ ಲಾಗೆ ಭೇಟಿ ನೀಡಿದ ಬಿಡದಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದೆ. ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲಿಸರು ದೃಢಪಡಿಸಿದ್ದಾರೆ. ಬಾಂಬ್ ಬೆದರಿಕೆ ಹಾಕಿದ ಆರೋಪಿಗಾಗಿ ಬಿಡದಿ ಪೊಲೀಸರು ಶೋಧ ನಡೆಸಿದ್ದಾರೆ.