HomeKarnatakaBIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ
ಮನವಿ ಮಾಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಗಿ ಹಂಚಿಕೆ ಮಾಡಿದ್ದಾರೆ. ನಿಯಮಗಳ ಪ್ರಕಾರ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಹಾಗೆ ಮಾಡದೆ ಕೈಗಾರಿಕಾ ಸಚಿವರ ಕಂಪನಿಗಳಿಗೆ ಭೂಮಿ ಹಂಚಲಾಗಿದೆ. ಬಿಡದಿ, ವಸಂತನರಸಾಪುರ, ಕೋಲಾರ, ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಕಾನುನು ಬಾಹಿರವಾಗಿ ನಿವೇಶನ ಹಂಚಲಾಗಿದೆ. ಇದಕ್ಕೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಇದರಿಂದಾಗಿ ಕೆಐಎಡಿಬಿಗೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವತೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular