HomeAgricultureರೈತರಿಗೆ ಗುಡ್ ನ್ಯೂಸ್: ಬಿದಿರು ಬೆಳೆ ಪ್ರೋತ್ಸಾಹ ಧನ ಯೋಜನೆ ಜಾರಿ, ಪ್ರತ್ಯೇಕ ಮಂಡಳಿ ರಚನೆ

ರೈತರಿಗೆ ಗುಡ್ ನ್ಯೂಸ್: ಬಿದಿರು ಬೆಳೆ ಪ್ರೋತ್ಸಾಹ ಧನ ಯೋಜನೆ ಜಾರಿ, ಪ್ರತ್ಯೇಕ ಮಂಡಳಿ ರಚನೆ

ಬೆಂಗಳೂರು: ಬಿದಿರು ಕೃಷಿಗೆ ಉತ್ತೇಜನ ಮತ್ತು ಅರಣ್ಯ ಪ್ರದೇಶದಲ್ಲಿ ಬಿದಿರು ಬೆಳೆಸಲು ಒತ್ತು ನೀಡಲು ರಾಜ್ಯ ಬಿದಿರು ಅಭಿವೃದ್ಧಿ ಮಂಡಳಿ, ಬಿದಿರು ಕೃಷಿ ಮತ್ತು ಉದ್ದಿಮೆ ನೀತಿ ರೂಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಬಿದಿರು ಕೃಷಿ ಮತ್ತು ಬಿದಿರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅರಣ್ಯ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ ಚರ್ಚೆ ನಡೆಸಿದ್ದು, ಮಹಾರಾಷ್ಟ್ರ ಮಾದರಿಯಲ್ಲಿ ಅನುಸರಿಸಲು ಚಿಂತನೆ ನಡೆಸಲಾಗಿದೆ.

ಬಿದಿರು ಬೆಳೆಯುವ ಕೃಷಿಕರಿಗೆ ಪ್ರೋತ್ಸಾಹ ಧನ ಯೋಜನೆ ಜಾರಿಗೊಳಿಸಲಾಗುವುದು. ಮಹಾರಾಷ್ಟ್ರ ಸರ್ಕಾರ ಬಜೆಟ್ ನಲ್ಲಿ 10,000 ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಯುವ ಬೆಳೆಗಾರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಘೋಷಿಸಿ ಜಾರಿಗೆ ತರುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲಿ ಅನುಸರಿಸಲು ಚರ್ಚೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಲಾನಯನ ಪ್ರದೇಶ, ಅಚ್ಚು ಕಟ್ಟು ಪ್ರದೇಶ, ಸರ್ಕಾರಿ ಬಂಜರು ಭೂಮಿಗಳಲ್ಲಿ ಬಿದಿರು ಬೆಳೆಯಲು ವಿಶೇಷ ಯೋಜನೆ ರೂಪಿಸುವ ಬಗ್ಗೆ ಕೃಷಿ, ಅರಣ್ಯ, ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ತಜ್ಞರು ಚರ್ಚೆ ನಡೆಸಿದ್ದಾರೆ. ಸರ್ಕಾರಕ್ಕೆ ಅನೇಕ ಶಿಫಾರಸುಗಳನ್ನು ನೀಡಲಾಗಿದ್ದು, ಶೀಘ್ರದಲ್ಲಿ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular