HomeKarnatakaBREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

BREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಹಿರೇಸೂರು ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಮೃತರು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರ್ ಸಾಬ್(60), ಮೊಹಮ್ಮದ್ ಮುಸ್ತಫಾ(36) ಶೋಹಿಬ್(6) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲಗಾ ಗ್ರಾಮದಿಂದ ಔಷಧ ಪಡೆದು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular