ಬೆಂಗಳೂರು : ರಾಜ್ಯದಲ್ಲಿ ಪಿಒಪಿ ಗಣೇಶನ ಮೂರ್ತಿ ಮಾರಾಟ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಚಿವರು ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ಪರಿಸರ ಸ್ನೇಹಿ ವಿಗ್ರಹಗಳನ್ನು ಉತ್ತೇಜಿಸಲು ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಬರಲಿದೆ. ಈ ಬಾರಿ ಗಣೇಶ ಚತುರ್ಥಿಯನ್ನು ಮತ್ತಷ್ಟು ಸಂಭ್ರಮಿಸಲು ನಾಡಿನೆಲ್ಲೆಡೆ ತಯಾರಿಗಳು ಶುರುವಾಗಿವೆ.
ನಾವೆಲ್ಲರೂ ಪರಿಸರ ಸ್ನೇಹಿ ಗಣೇಶ ವಿಗ್ರಹವನ್ನು ಪೂಜಿಸುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ. ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸಿ ಪೂಜಿಸೋಣ. ಪರಿಸರ ಸ್ನೇಹಿ ಗಣೇಶೋತ್ಸವ ನಮ್ಮ ಆದ್ಯತೆಯಾಗುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸೋಣ. ರಾಜ್ಯದಲ್ಲಿ ಪಿಒಪಿ ಗಣೇಶನ ಮೂರ್ತಿ ಮಾರಾಟ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ.