ಬೆಂಗಳೂರು : ‘ಪ್ರಜ್ವಲ್ ರೇವಣ್ಣ’ ಲೈಂಗಿಕ ಕಿರುಕುಳ ನೀಡಿರುವುದು ಧೃಡವಾಗಿದ್ದು, ಪೊಲೀಸರು ‘ಚಾರ್ಜ್ ಶೀಟ್’ ಸಲ್ಲಿಕೆ ಮಾಡಿದ್ದಾರೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ ಐ ಟಿ ಶುಕ್ರವಾರ ಆರೋಪ ಪಟ್ಟಿ ಸಲ್ಲಿಸಿದೆ.
ಅಲ್ಲದೇ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಪ್ರಜ್ವಲ್ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಎಸ್ ಐ ಟಿ ಹೇಳಿದೆ.ಪ್ರಜ್ವಲ್ ರೇವನಣ್ಣ ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಧೃಡವಾಗಿದೆ.ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಂಡು ಪ್ರಜ್ವಲ್ ಬೆದರಿಕೆ ಹಾಕುತ್ತಿದ್ದರು ಎಂಬ ವಿಚಾರವನ್ನು ಎಸ್ ಐ ಟಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ, ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ಐಟಿ ಅಧಿಕಾರಿಗಳು ಕೋರ್ಟ್ ಗೆ 2000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ .
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿಗೆ ವಹಿಸಿತ್ತು.