HomeKarnatakaತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು

ತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.

ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಡಿಢೀರ್ ದಾಳಿ ನಡೆಸಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹನುಮಂತಪ್ಪ ಅವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular