ಬೆಂಗಳೂರು : ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.