HomeKarnatakaBIG NEWS: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ: ಬಂಧಿತ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

BIG NEWS: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ: ಬಂಧಿತ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಕಾರ್ಕಾಳ: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಬಿಯರ್ ನಲ್ಲಿ ಡ್ರಗ್ಸ್ ಬೆರಸಿ ಕೊಟ್ಟು ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಾದ ಅಲ್ತಾಫ್ ಹಾಗೂ ಸವೇರ ರಿಚರ್ಡ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇನ್ನೊಂದೆಡೆ ಸಂತ್ರಸ್ತ ಯುವತಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಆಕೆಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಯುವತಿಗೆ ಚಿಕಿತ್ಸೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಗೆ ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯನಾದ ಆರೋಪಿ ಅಲ್ತಾಫ್, ಆಕೆಯನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಿಯರ್ ನಲ್ಲಿ ಡ್ರಗ್ಸ್ ಬೆರೆಸಿಕೊಟ್ಟು ಅತ್ಯಾಚಾರವೆಸಗಿದ್ದ. ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಸದ್ಯ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular