HomeKarnatakaKSRTC ಬಸ್-ಕಾರು ಭೀಕರ ಅಪಘಾತ: ಐವರ ಸ್ಥಿತಿ ಗಂಭೀರ

KSRTC ಬಸ್-ಕಾರು ಭೀಕರ ಅಪಘಾತ: ಐವರ ಸ್ಥಿತಿ ಗಂಭೀರ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ದಿಯಲ್ಲಿ ನಡೆದಿದೆ.

ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ.

ಗಾಯಾಳುಗಳು ಬೆಳಕವಾಡಿ ಗ್ರಾಮದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಡದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular