HomeKarnatakaಕಾರ್ಕಳ ಯುವತಿ ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಕಾರ್ಕಳ ಯುವತಿ ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಕಾರ್ಕಳದಲ್ಲಿ ನಡೆದ ಯುವತಿ ಕಿಡ್ನ್ಯಾಪ್ ಹಾಗೂ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಪೈಶಾಚಿಕ ಕೃತ್ಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಷಯ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲೆಯಲ್ಲಿ ಎಚ್ಚರಿಕೆ ವಹಿಸುವಂತೆ ನಿರ್ದೇಶಿಸಲಾಗಿದೆ.

ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ; ಇದರ ಹಿಂದೆ ಯಾರೇ ಇದ್ದರೂ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆಯನ್ನು ನೀಡುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular