HomeKarnatakaBREAKING NEWS: ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜತಿಥ್ಯ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಗೃಹ...

BREAKING NEWS: ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜತಿಥ್ಯ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖುದ್ದು ಭೇಟಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.

ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ಈಗಾಗಲೇ ಅಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬದಿಗಳನ್ನು ಅಮಾನತುಗೊಳಿ ಆದೇಶ ಹೊರಡಿಸಲಾಗಿದೆ. ತನಿಖೆ ನಡೆಸಿ ವರದಿ ನೀಡುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಅವರಿಗೆ ಡಿಜಿ-ಐಜಿಪಿ ಅಲೋಕ್ ಮೋಹನ್ ಸಾಥ್ ನೀಡಿದ್ದಾರೆ. ಜೈಲಧಿಕಾರಿಗಳ ಜೊತೆಯೂ ಗೃಹ ಸಚಿವರು ಚರ್ಚೆ ನಡೆಸಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular